10:10 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ  ಬಂಧನ

08/06/2022, 07:35

ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ  ಬರುವ ಸಮಯದಲ್ಲಿ ಊರಿನ ಪಕ್ಕದ ಗ್ರಾಮದ ಆರೋಪಿ  ದೇವರಾಜ್ ಹಂತೂರು ಎಂಬುವನು ನಿನ್ನನ್ನು ಊರಿಗೆ ಬಿಟ್ಟು ಹೋಗುತ್ತೇನೆಂದು  ಹೇಳಿ, ಬೈಕ್ ನಲ್ಲಿ ಕುಳಿತ ಬಳಿಕ ಅವಾಚ್ಯ ವರ್ತನೆ ಮಾಡಿದ್ದಾನೆಂದು  ಯುವತಿ ಆರೋಪಿಸಿದ್ದಾಳೆ.

ಈ ವರ್ತನೆಯನ್ನು ಕಂಡು ಆಕೆಯು  ಬೈಕಿನಿಂದ  ಇಳಿಯಲು ಪ್ರಯತ್ನಿಸಿದಾಗ  ಮೈಮೇಲೆ  ಕೈ ಹಾಕಿ ಬಲಾತ್ಕಾರ ನಡೆಸಲು ಯತ್ನಿಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಯುವತಿಯು  ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾಳೆ. ಘಟನಾ ಸಂಬಂಧ ಆರೋಪಿಯನ್ನು ಬಂಧಿಸಿರುವ ಗೋಣಿಬೀಡು ಪಿ.ಎಸ್.ಐ ಧನಂಜಯ್ ಹಾಗೂ  ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು