1:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮೂಡುಬಿದರೆ: ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆ ಫೆ.11ರಂದು ಉದ್ಘಾಟನೆ; ಸಂಗೀತ ಸ್ಪರ್ಧೆ, ಸಾಧಕರಿಗೆ ಸನ್ಮಾನ

06/02/2024, 17:23

ಮೂಡುಬಿದರೆ(reporterkarnataka.com): ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆಯ ಉದ್ಘಾಟನಾ ಸಮಾರಂಭ ಮೂಡುಬಿದರೆಯ ವೆಂಕಟರಮಣ ಹನುಮಂತ ದೇವಸ್ಥಾನ ಸಮೀಪದ ಲಕ್ಷ್ಮೀನರಸಿಂಹ ಕಟ್ಟಡದಲ್ಲಿ ಫೆಬ್ರವರಿ 11ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸುವರು. ಜೆ.ಎ. ಅಕಾಡೆಮಿ ಸಂಸ್ಥಾಪಕ ಡಾ. ಶಿವರಾಜ ಅರಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೂಡುಬಿದರೆ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಉದ್ಯಮಿ ಶ್ರೀಪತಿ ಭಟ್ ಭಾಗವಹಿಸುವರು.
*ಕಾರ್ಯಕ್ರಮದ ವಿಶೇಷ:* ವಿಶೇಷ ಕಾರ್ಯಕ್ರಮವಾಗಿ ದ.ಕ. ಹಾಗೂ ಉಡುಪಿ ಜಿಲ್ಲಾಮಟ್ಟದ ಸಂಗೀತ ಸ್ಪರ್ಧೆ ನಡೆಯಲಿದೆ. ಲಘು ಸಂಗೀತ, ಲಘು ಶಾಸ್ತ್ರೀಯ ಗಾಯನ ಜರುಗಲಿದೆ. ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಶಿರ್ತಾಡಿ ಅವರು ಅಧ್ಯಕ್ಷತೆ ವಹಿಸುವರು.
*ಸಮಾರೋಪ:* ಸಮಾರೋಪ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೌರವ ಉಪಸ್ಥಿತಿ ಇರುವರು. ಜೆ. ಎ. ಅಕಾಡೆಮಿ ಸಂಸ್ಥಾಪಕ ಡಾ. ಶಿವರಾಜ ಅರಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಲಕ್ಷ್ಮೀ ನರಸಿಂಹ ಬಿಲ್ಡಿಂಗ್ ಮಾಲೀಕ ಶ್ರೀನಾಥ್ ಭಟ್ ಹಾಗೂ ದ.ಕ. ಜಿಲ್ಲಾ ಮಹಿಳಾ ಕಾರ್ಮಿಕ ಘಟಕ ಹಾಗೂ ಜಾನಪದ ಪರಿಷತ್ ಅಧ್ಯಕ್ಷೆ ಪದ್ಮಶ್ರೀ ಭಟ್ ಪಾಲ್ಗೊಳ್ಳುವರು.
*ಸಾದಕರಿಗೆ ಸನ್ಮಾನ:* ಈ ಸಂದರ್ಭದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಮಹಮ್ಮದ್ ಇಲಿಯಾಸ್, ರಾಷ್ಟ್ರಮಟ್ಟದ ನೆಟ್ ಬಾಲ್ ಸ್ವಾಫ್ಟ್ ಬಾಲ್ ಆಟಗಾರ್ತಿ ರಕ್ಷಿತಾ ಶಿರ್ತಾಡಿ ಹಾಗೂ ರ್ಯಾಂಕ್ ವಿಜೇತೆ ಕೃತಿಕಾ ಭಟ್ ಅವರನ್ನು ಸನ್ಮಾನಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು