5:41 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು