4:01 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 18,500ಕ್ಕೂ ಅಧಿಕ ಶಿಕ್ಷಕ ನೇಮಕ: ಮಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

06/10/2025, 23:07

ಮಂಗಳೂರು(reporterkarnataka.com): ರಾಜ್ಯದ ಸರಕಾರಾಜ್ಯದ ಸರಕಾರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,500ಕ್ಕೂ ಅಧಿಕ ಶಿಕ್ಷಕರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕ ಮಾಡಲಾಗಿತ್ತು. ತಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಸಾವಿರ ಶಿಕ್ಷಕರ ನೇಮಕಾತಿ ನಡೆದಿದ್ದು, ಮತ್ತೆ 18,500 ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆದಿದೆ. ಜಸ್ಟಿಸ್ ನಾಗಮೋಹನ್ದಾಸ್ ಅವರ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು ಎಂದವರು ಹೇಳಿದರು.
ಎಲ್ ಕೆಜಿಯಿಂದ 12ನೇ ತರಗತಿವರೆಗೆ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್)ಮಾದರಿಯಡಿ ಶೇ.80ರಷ್ಟು ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಈ ಶಾಲೆಗಳಲ್ಲಿ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಇದೇ ವೇಳೆ 3 ಸ್ತರದ ಪರೀಕ್ಷಾ ಪದ್ಧತಿಯೂ ಕೂಡಾ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ.
ಈ ಪರೀಕ್ಷಾ ವ್ಯವಸ್ಥೆಯಿಂದ 2ನೇ ಸ್ತರ ಹಾಗೂ 3ನೇ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 1,16,000 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲೂ 56,000ಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ. ಈ ಪರೀಕ್ಷಾ ವ್ಯವಸ್ಥೆಯನ್ನು ಉಚಿತವಾಗಿ ಮಾಡುವ ಮೂಲಕ ನಾನಾ ಕಾರಣಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅವಕಾಶ ಕಲ್ಪಿಸಿ ಮುಂದಿನ ಭವಿಷ್ಯ ರೂಪಿಸಲು ಅನುವು ಮಾಡಿಕೊಡಲಾಗಿದೆ. ಈ ಮಾದರಿಯನ್ನು ಕೇಂದ್ರ ಸರಕಾರವೂ ಕಾಪಿ ಮಾಡಿಕೊಳ್ಳಲು ಹೊರಟಿದೆ ಎಂದು ಹೇಳಿದರು.
ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷವಾದ ಬಿಜೆಪಿ ವಿರೋಧಿಸಿದ್ದು, ದುಡ್ಡೇ ಸಿಗದು ಎಂದು ಅಪಪ್ರಚಾರ ಮಾಡಿತ್ತು. ಆದರೆ ಐದು ಗ್ಯಾರಂಟಿಗಳೂ ಇದೀಗ ಯಶಸ್ವಿಯಾಗಿ ಜಾರಿಯಾಗಿವೆ. ಇದೀಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಿರೆಯೇ ಎಂದು ಪ್ರಶ್ನಿಸಿದರು.
ಕೇಂದ್ರ ಸರಕಾರವು ಅವೈಜ್ಞಾನಿಕವಾಗಿ ಜಿಎಸ್ ಟಿ ಜಾರಿಗೊಳಿಸಿ ಇದೀಗ ಕಡಿಮೆ ಮಾಡಿ ಸಂಭ್ರಮ ಪಡುತ್ತಿರುವುದು ಹಾಸ್ಯಾಸ್ಪದ ಎಂದ ಅವರು, ಸಮಾಜದ ಎಲ್ಲಾ ವರ್ಗದ ಜನರಿಗೆ ನ್ಯಾಯಯುತವಾಗಿ ಸರಕಾರದಿಂದ ಸಿಗಬೇಕಾದ ಸೌಲಭ್ಯದ ಹಂಚಿಕೆಗಾಗಿ ನಡೆಯುತ್ತಿರುವ ಸಮೀಕ್ಷೆಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಅಕ್ಟೋಬರ್ 8ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಆವರೆಗೆ ಎಷ್ಟು ಪ್ರಮಾಣದ ಸಮೀಕ್ಷೆ ಆಗಿದೆ ಎಂಬ ನೆಲೆಯಲ್ಲಿ ಆಯೋಗದ ನಿರ್ದೇಶನದ ಮೇರೆಗೆ, ಮುಂದೆ ಸಮೀಕ್ಷೆಗೆ ಶಿಕ್ಷಕರನ್ನು ಮಕ್ಕಳ ಪಾಠ-ಚಟುವಟಿಕೆಗಳಿಗೆ ತೊಂದರೆ ಆಗದಂತೆ ಯಾವ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ನಿರ್ಧರಿಸಲಿದೆ. ಶೇ.95ರಷ್ಟು ಶಿಕ್ಷಕರು ರಾಜ್ಯದಲ್ಲಿ ಸಮೀಕ್ಷೆಯಲ್ಲಿ ಮುಂಚೂಣಿಯಲ್ಲಿದ್ದು ಸಹಕರಿಸಿದ್ದಾರೆ ಎಂದವರು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಪದ್ಮರಾಜ್, ಶುಭೋದಯ ಆಳ್ವ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ನೀರಜ್ ಪಾಲ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು