1:57 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮೋಟೋ ಎಡ್ಜ್ 30 ಅಲ್ಟ್ರಾ 5G ಇಂದಿನಿಂದ ಮಾರುಕಟ್ಟೆಗೆ: 200 ಮೆಗಾಪಿಕ್ಸೆಲ್ ಕ್ಯಾಮರಾ

23/09/2022, 12:13

ಮುಂಬೈ(reporterkarnataka.com):
200 ಮೆಗಾಪಿಕ್ಸೆಲ್ ಕ್ಯಾಮರಾ ಸಾಮರ್ಥ್ಯ ಹೊಂದಿರುವ ಮೋಟೋ ಎಡ್ಜ್ 30 ಅಲ್ಟ್ರಾ 5G ಮೊಬೈಲ್ ಇದೀಗ ಮಾರುಕಟ್ಟೆಯಲ್ಲಿ ಈ ಮೊಬೈಲ್ ಇಂದಿನಿಂದ ಲಭ್ಯವಿದೆ. ಕಳೆದ ವಾರ ಭಾರತದಲ್ಲಿ ಈ ಫೋನನ್ನು ಲಾಂಚ್ ಮಾಡಲಾಗಿತ್ತು. 

ಈ ಫೋನಿನ ಪ್ರಮುಖ ವಿಶೇಷತೆ ಕ್ಯಾಮೆರಾ ಆಗಿದ್ದು, ಇದು ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಫೋನಾಗಿದೆ. ಜೊತೆಗೆ ಅತ್ಯಂತ ವೇಗದ 125W ಫಾಸ್ಟ್ ಚಾರ್ಜರ್ ಅಳವಡಿಸಲಾಗಿದೆ. ಇದೀಗ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಇಂದಿನಿಂದ ಆರಂಭವಾಗಿರುವ ಬಿಗ್ ಬಿಲಿಯನ್‌ ಡೇಸ್‌ ಸೇಲ್​ನಲ್ಲಿ (Flipkart’s Big Billion Days sale) ಮಾರಾಟ ಕಾಣುತ್ತಿದೆ. ಈ ಫೋನ್ ಮೇಲೆ ಅತ್ಯುತ್ತಮ ಎಕ್ಸ್‌ಚೇಂಜ್ ಕೊಡುಗೆ, ಬ್ಯಾಂಕ್‌ ಆಫರ್‌ಗಳನ್ನು ನೀಡಲಾಗಿದೆ.

ಮೋಟೋ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಭಾರತದಲ್ಲಿ 59,999 ರೂ. ನಿಗದಿ ಮಾಡಲಾಗಿದೆ. ಆದರೆ, ಫ್ಲಿಪ್​ಕಾರ್ಟ್​ನಲ್ಲಿ ಆಫರ್ ಮೂಲಕ ಈ ಫೋನನ್ನು ನೀವು 54,999ರೂ. ಗಳಿಗೆ ಖರೀದಿಸಬಹುದು. ಗ್ರಾಹಕರು ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿ ಮಾಡಿದರೆ, 3,000ರೂ. ಗಳ ಇನ್‌ಸ್ಟಂಟ್‌ ರಿಯಾಯಿತಿ ದೊರೆಯುತ್ತದೆ

ಇದು 6.67 ಇಂಚಿನ ಫುಲ್ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ರೇಟ್​ನಿಂದ ಕೂಡಿದ್ದು ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ನಾಪ್‌ಡ್ರಾಗನ್ ಎಲೈಟ್ ಗೇಮಿಂಗ್ ಫೀಚರ್ ಕೂಡ ಅಳವಡಿಸಲಾಗಿದೆ.

ವಿಶೇಷವಾಗಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸ್ಯಾಮ್​ಸಂಗ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದು f/1.9 ಅಪಾರ್ಚರ್ ಲೆನ್ಸ್​ನಿಂದ ಕೂಡಿದೆ. ಎರಡನೇ ಕ್ಯಾಮೆರಾ 50 ಮೆಗಾಫಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಬೃಹತ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.ಇದರಲ್ಲಿ ಪ್ರಾಥಮಿಕ ಕ್ಯಾಮರಾ OIS ಬೆಂಬಲವನ್ನು ಪಡೆದುಕೊಂಡಿದೆ. ಸೆಲ್ಪೀ ಕ್ಯಾಮೆರಾವು 4K ವಿಡಿಯೋ ರೆಕಾರ್ಡ್ ಮಾಡುತ್ತದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠ 4610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಪಡೆದುಕೊಂಡಿದೆ. ಈ ಮೂಲಕ ಕೆಲವೇ ನಿಮಿಷಗಳಲ್ಲಿ ಫುಲ್‌ ಚಾರ್ಜ್‌ ಮಾಡಲು ಸಾಧ್ಯವಾಗಲಿದೆ. ಕಂಪನಿ ಹೇಳಿರುವ ಪ್ರಕಾರ 7 ನಿಮಿಷ ಚಾರ್ಜ್ ಮಾಡಿದರೆ 12 ಗಂಟೆಗಳ ಕಾಲ ಉಪಯೋಗಿಸಬಹುದಂತೆ. ಇದರ ಜೊತೆಗೆ 50W ವೈಯರ್​ಲೆಸ್ ಚಾರ್ಜಿಂಗ್ ಸಪೋರ್ಟ್ ಕೂಡ ಪಡೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು