12:23 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ 11ರ ಪೋರ!

03/01/2026, 13:20

ಮಂಗಳೂರು(reporterkarnataka.com): ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ 8ನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಏರಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ 3ನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.
ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅರೀ ಎತ್ತರದ ಪರ್ವತ ಕಿಲಿಮಂಜಾರೋವನ್ನು 2022ರ ಆಗಸ್ಟ್ 4ರಂದು ಏರಿದ್ದು, ಈ ಸಾಧನೆ ಮಾಡಿದ ಜಗತ್ತಿನ ಅತಿ ಕಿರಿಯ ಎಂಬ ಹೆಗ್ಗಳಿಕೆ ಗಳಿಸಿದ್ದಾನೆ. ತನ್ನ 9ನೇ ವಯಸ್ಸಿನಲ್ಲಿ ಅಮೆರಿಕದ ಅತಿ ಎತ್ತರದ ಪರ್ವತ ಅಕಾಂಕಾಗುವಾ ಏರಿದ್ದು, ಇದನ್ನೂ ಅತಿ ಕಿರಿಯ ವಯಸ್ಸಿನಲ್ಲಿ ಏರಿದ ಬಾಲಕನೆಂಬ ಕೀರ್ತಿಗೆ ಪಾತ್ರವಾಗಿದ್ದಾನೆ. ಇದೀಗ 11ನೇ ವಯಸ್ಸಿನಲ್ಲಿ 2025ರ ಡಿ.30ರಂದು ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾನೆ.


ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್, ಮೌಂಟ್ ಎಲ್ ಬ್ರಸ್, ಅನ್ನಪೂರ್ಣ ಬೇಸ್ ಕ್ಯಾಂಪ್ ಸೇರಿದಂತೆ ಈಗಾಗಲೇ ಜಗತ್ತಿನ ಎತ್ತರದ ಶಿಖರಗಳನ್ನು ಅಯಾನ್ ಮೆಂಡನ್ ಏರಿದ್ದಾನೆ. ಆಮೂಲಕ ಸಾಮಾನ್ಯ ಜನರು ಊಹಿಸುವುದಕ್ಕೂ ಸಾಧ್ಯವಾಗದ ಎತ್ತರಗಳನ್ನು ತನ್ನ ಸಣ್ಣ ವಯಸ್ಸಿನಲ್ಲೇ ಏರುವ ಮೂಲಕ ಜಗತ್ತಿನ ಗಮನ ಸೆಳೆದಿದ್ದಾನೆ. ಇದಕ್ಕಾಗಿ ಹೆತ್ತವರ ನಿರಂತರ ಬೆಂಬಲದೊಂದಿಗೆ ನುರಿತ ತಜ್ಞರಿಂದ ಅವಿರತ ತರಬೇತಿಯನ್ನೂ ಪಡೆಯುತ್ತಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು