6:04 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು