7:58 PM Friday15 - August 2025
ಬ್ರೇಕಿಂಗ್ ನ್ಯೂಸ್
ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ: ಕಡಲನಗರಿಯಲ್ಲಿ ಪೂರ್ವಭಾವಿ ಸಭೆ

05/11/2024, 20:33

ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯಲಿರುವ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಸಂಸದರು, ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ ಎಂದರು.
ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಕೆಲಸವನ್ನು ಯುವಕರು ಮಾಡಬೇಕು.
ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ನುಡಿದರು.
ಜಿಲ್ಲಾ ಕಂಬಳ ಸಮಿತಿಯ ವಿಜಯ ಕುಮಾರ್ ಕಂಗಿನಮನೆ ಮಾತನಾಡಿ, ಮಂಗಳೂರಿನಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಅವರು ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.


ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ,ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್,ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು.
ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು, ಕಾರ್ಯದರ್ಶಿ ಮನ್ಮತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು