9:11 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

23/12/2025, 21:11

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.


ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು.
ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ​​ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.
2025-26 ಋತುವಿನಲ್ಲಿ ಉತ್ಪಾದಿಸಿದ ಎಫ್‌ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕಿಲೋಗ್ರಾಂಗೆ ಒಂದು ರೂಪಾಯಿ ಮತ್ತು ಮಾರಾಟದ ಆದಾಯದಲ್ಲಿ ಶೇ. 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು