10:57 PM Wednesday30 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಮೃತ ಕಾರ್ಮಿಕ ಕುಟುಂಬಕ್ಕೆ 2 ಲಕ್ಷ ಪರಿಹಾರ ಕೊಡಿ: ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ ಆಗ್ರಹ

23/10/2021, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕಾರ್ಮಿಕ ಕಾರ್ಡ್ ಫಲಾನುಭವಿ ಹಾಗೂ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ಸರ್ಕಾರ, ಇಲಾಖೆಯ ಮೂಲಕ ಮೃತ ಕಾರ್ಮಿಕ ಕುಟುಂಬಕ್ಕೆ ಅಂತ್ಯ ಸಂಸ್ಕಾರ ಹಾಗೂ ಅನುಗ್ರಹ ರಾಶಿ ವೆಚ್ಚಕ್ಕೆಂದು ಒಟ್ಟು 54 ಸಾವಿರಗಳನ್ನು ಮಂಜೂರು ಮಾಡುತ್ತಿದೆ. ಬೆಲೆ ಏರಿಕೆ ಹಿನ್ನಲೆಯಲ್ಲಿ ಅದು ನೊಂದ ಹಾಗೂ ಸಂಕಷ್ಟದಲ್ಲಿರುವ ಕುಟುಂಬಕ್ಕೆ, ಯಾವುದೇ ರೀತಿಯಲ್ಲಿ ಕಾಯಂ ನೆರವಿಗೆ ಸಹಕಾರಿಯಾಗಲಾರದು. ಕಾರಣ ಸರ್ಕಾರ ಮೃತ ಕಾರ್ಮಿಕ ಕುಟುಂಬಕ್ಕೆ ತಲಾ 2 ಲಕ್ಷಕ್ಕೂ ಹೆಚ್ಚು ಹಣ ಮಂಜೂರು ಮಾಡಬೇಕೆಂದು ಸಿಐಟಯು ಕಾರ್ಯದರ್ಶಿ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ ಒತ್ತಾಯಿಸಿದ್ದಾರೆ.

ಅವರು ಹಲವು ದಿನಗಳ ಹಿಂದೆಯಷ್ಟೆ ಮೃತಪಟ್ಟಿದ್ದ,ಕೂಡ್ಲಿಗಿ ತಾಲೂಕು ಬಂಡೇ ಬಸಾಪುರ ತಾಂಡ ನಿವಾಸಿ ಹಾಗೂ ಕಟ್ಟಡ ಕಾರ್ಮಿಕ ತಾವರೆನಾಯ್ಕ ಕುಟುಂಬಕ್ಕೆ. ಸರ್ಕಾರ ಕಾರ್ಮಿಕ ಇಲಾಖೆಯಿಂದ ನೀಡಲ್ಪಟ್ಟಿರುವ 54 ಸಾವಿರ ಹಣವನ್ನು ಮಂಜೂರು ಮಾಡಿದ್ದು, ಕಾರ್ಮಿಕ ಸಂಘಟನೆ ಯ ಕಚೇರಿಯಲ್ಲಿ ಲಭ್ಯವಾದ ಪರಿಹಾರ ಹಣ ಮಂಜೂರು ಆಗಿರುವ ಪತ್ರವನ್ನು.ಪಟ್ಟಣದ ಶ್ರೀಕೊತ್ತಲಾಂಜನೇಯ ದೇವಸ್ಥಾನದ ಹತ್ತಿರವಿರುವ, ಸಿಐಟಿಯು ಹಾಗೂ ಕಟ್ಟಡ ಕಾರ್ಮಿಕ ಸಂಘದ ಕಚೇರಿಯಲ್ಲಿ ಬಿಬಿ ತಾಂಡದ ಲಕ್ಷ್ಮೀಬಾಯಿ ತಾವರೆ ನಾಯ್ಕರವರಿಗೆ, ಕಾರ್ಮಿಕ ಇಲಾಖೆಯಿಂದ ನೀಡಲ್ಪಡುವ ಹಣ ಮಂಜೂರಾತಿ ಪತ್ರ ನೀಡಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಲೆಯೇರಿಕೆ ನೀತಿ ಕಾರ್ಮಿಕರಿಗೆ ಹಾಗೂ ರೈತರಿಗೆ ಮಾರಕವಾಗಿದ್ದು, ಕಾರ್ಮಿಕರಿಗೆ ಕಿಟ್ಟು ಕೊಡೋ ನೆಪದಲ್ಲಿ ಸರ್ಕಾರಗಳಿಂದ ಕಾರ್ಮಿಕರ ಹಣವನ್ನು ಲೂಟಿ ಹೊಡೆಯುವ ಹುನ್ನಾರ ನಡೆಸಲಾಗಿದೆ. ಕೋವಿಡ್ ಹಣ ಸಮರ್ಪಕವಾಗಿ ಒದಗಿಸಿಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಿಲ್ಲ, ನೊಂದ ಅರ್ಹ ಫಲಾನುಭವಿಗಳಿಗೆ ಯೋಗ್ಯ ಪರಿಹಾರ ಹಣ ನೀಡುತ್ತಿಲ್ಲ, ಕಾರ್ಮಿಕರ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಗಳು, ಕಾರ್ಮಿಕರ ಕಣ್ಣೀರೊರವಸುವುದನ್ನು ಬಿಟ್ಟು ಅವೈಜ್ಞಾನಿಕ ನೀತಿಯ ಮಾನದಂಡದಂತೆ ಪರಿಹಾರ ನೀಡಲಾಗುತ್ತಿದೆ. ಇದು ಸರ್ಕಾರ ಕಾರ್ಮಿಕರ  ಮೂಗಿಗೆ ತುಪ್ಪ ಸವರುವ ಕಾರ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರವೇ ಸರ್ಕಾರ  ಪರಿಹಾರ ಹಣ ಹೆಚ್ಚಿಸಬೇಕು ಹಾಗೂ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕಿದೆ ಎಂದು, ಗುನ್ನಳ್ಳಿ ರಾಘವೇಂದ್ರ ಸರ್ಕಾರಗಳಿಗೆ ಈ ಮೂಲಕ ಒತ್ತಾಯಿಸಿದರು.ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಇದ್ದರು.

 ವಿ.ಜಿ.ವೃಷಭೇಂದ್ರ ಕೂಡ್ಲಿಗಿ

ಇತ್ತೀಚಿನ ಸುದ್ದಿ

ಜಾಹೀರಾತು