10:44 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ವೆನ್ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಸ್ತಾಂತರ

29/03/2025, 23:59

ಮಂಗಳೂರು(reporterkarnataka.com): ಎಂಆರ್ ಪಿಎಲ್ ಸಂಸ್ಥೆ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು.
ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸಜಿ೯ಕಲ್ ವಾಡ್೯ ನಿಮಾ೯ಣಗೊಳ್ಳಲಿದ್ದು, ಹೊಸದಾಗಿ 132 ಹಾಸಿಗೆಗಳು ಸೇಪ೯ಡೆಗೊಳ್ಳಲಿವೆ.
ಪಿಲಿಕುಳ ವಿಜ್ಞಾನ ಕೇಂದ್ರ ಆವರಣದಲ್ಲಿ 5.43 ಕೋಟಿ ವೆಚ್ಚದಲ್ಲಿ ಖಗೋಳ ಶಾಸ್ತ್ರ ಗ್ಯಾಲರಿ ನಿಮಾ೯ಣಗೊಳ್ಳಲಿದೆ.
ಈ ಸಂದಭ೯ದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಎಂಆರ್ ಪಿಎಲ್ ಎಂಡಿ ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಪಿಲಿಕುಳ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು