ಇತ್ತೀಚಿನ ಸುದ್ದಿ
ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳ ಹೋರಾಟಕ್ಕೆ ಎಸ್‌ಡಿಐಓ ಕರ್ನಾಟಕ ರಾಜ್ಯ ಸಮಿತಿ ಬೆಂಬಲ
23/10/2024, 20:03
ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ನಗರದ ಮಿನಿ ವಿಧಾನ ಸೌಧದ ಬಳಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ, ಎಸ್‌ಡಿಐಓ ಕರ್ನಾಟಕ ರಾಜ್ಯ ಸಮಿತಿ ಪರವಾಗಿ ಬೆಂಬಲ ನೀಡಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಐಡಿಎಸ್‌ಓ ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ವಿನಯ ಚಂದ್ರ ಎಸ್.ವಿ. ಅವರು ಬೆಂಬಲವನ್ನು ಸೂಚಿಸಿ ಮಾತನಾಡಿದರು.














