ಇತ್ತೀಚಿನ ಸುದ್ದಿ
ಮುಂಬರುವ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಗೊತ್ತೇ?
09/01/2023, 20:18

ಕೋಲಾರ(reporterkarnataka.com):
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದೆ. ಸಿದ್ದರಾಮಯ್ಯ ಅವರು ತಾನು ಸ್ಪರ್ಧಿಸಲಿರುವ ಕ್ಷೇತ್ರದ ಹೆಸರು ಬಹಿರಂಗಪಡಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ
ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಕೋಲಾರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ಕೋಲಾರದಿಂದ ಸ್ಪರ್ಧೆ ಮಾಡುವ ಇಂಗಿತ ಹೊಂದಿದ್ದೇನೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ ಎಂದು ಹೇಳಿದರು.
ಶಾಸಕ ಶ್ರೀನಿವಾಸಗೌಡ, ಮುನಿಯಪ್ಪ, ರಮೇಶ್ ಕುಮಾರ್, ಮುನಿಶಾಮಪ್ಪ, ನಸೀರ್ ಅಹ್ಮದ್ ಹಾಗೂ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ತುಂಬಾ ಆಭಾರಿ ಆಗಿದ್ದೇನೆ. ಕೋಲಾರ ಕ್ಷೇತ್ರದ ಜನರಿಗೆ ನಾನು ಯಾವತ್ತೂ ಆಭಾರಿ ಎಂದು ಹೇಳಿದ ಸಿದ್ದರಾಮಯ್ಯ ಅವರ ಮಾತಿಗೆ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಜೋರಾಗಿ ಕೇಳಿ ಬಂತು.
ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ನಿರಂತರವಾಗಿ ಕೆಲಸ ಮಾಡಿದ್ದಾರೆ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದರು.