12:05 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಗೊತ್ತೇ?

09/01/2023, 20:18

ಕೋಲಾರ(reporterkarnataka.com):
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದೆ. ಸಿದ್ದರಾಮಯ್ಯ ಅವರು ತಾನು ಸ್ಪರ್ಧಿಸಲಿರುವ ಕ್ಷೇತ್ರದ ಹೆಸರು ಬಹಿರಂಗಪಡಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ
ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕೋಲಾರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ಕೋಲಾರದಿಂದ ಸ್ಪರ್ಧೆ ಮಾಡುವ ಇಂಗಿತ ಹೊಂದಿದ್ದೇನೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ ಎಂದು ಹೇಳಿದರು.
ಶಾಸಕ ಶ್ರೀನಿವಾಸಗೌಡ, ಮುನಿಯಪ್ಪ, ರಮೇಶ್ ಕುಮಾರ್, ಮುನಿಶಾಮಪ್ಪ, ನಸೀರ್ ಅಹ್ಮದ್ ಹಾಗೂ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ತುಂಬಾ ಆಭಾರಿ ಆಗಿದ್ದೇನೆ. ಕೋಲಾರ ಕ್ಷೇತ್ರದ ಜನರಿಗೆ ನಾನು ಯಾವತ್ತೂ ಆಭಾರಿ ಎಂದು ಹೇಳಿದ ಸಿದ್ದರಾಮಯ್ಯ ಅವರ ಮಾತಿಗೆ ಕಾಂಗ್ರೆಸ್‌ ಕಾರ್ಯಕರ್ತರು ಜೈಕಾರ ಜೋರಾಗಿ ಕೇಳಿ ಬಂತು.

ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ನಿರಂತರವಾಗಿ ಕೆಲಸ ಮಾಡಿದ್ದಾರೆ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು