ಇತ್ತೀಚಿನ ಸುದ್ದಿ
ಮೂಡಬಿದ್ರೆ: ಆಡಳಿತ ಸೌಧ ಕಟ್ಟಡ ಸಿಎಂ ಬೊಮ್ಮಾಯಿ ಉದ್ಘಾಟನೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
27/04/2022, 20:47

ಮೂಡುಬಿದ್ರೆ(reporterkarnataka.com): ಮೂಡಬಿದ್ರೆ ತಾಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆ ಮತ್ತು ಮುಲ್ಕಿ-ಮೂಡಬಿದ್ರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನೆರವೇರಿಸಿದರು.
ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸೋಮಣ್ಣ, ಬಿ ಸಿ ನಾಗೇಶ್, ಡಾ. ಸುಧಾಕರ್, ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ಮುಂತಾದವರು ಉಪಸ್ಥಿತರಿದ್ದರು.