5:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ

19/09/2024, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ‌ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ. ತಂದೆ-ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ‌ ನಡೆದಿದೆ. ಮಂಜುನಾಥ್ ಹಾಗೂ ಮಂಗಳಾ ದಂಪತಿಯ ಪುತ್ರಿ ಈ 5 ವರ್ಷದ ಬಾಲಕಿ. ಮಗುವಿಗೆ ಜ್ವರ ಇತ್ತು ಎಂದು ದಂಪತಿ ಮನೆಯಲ್ಲೇ ಬಿಟ್ಟು ಹೋಗಿದ್ದರು.ದಂಪತಿ ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ
ಬಾಲಕಿ ಶವವಾಗಿ ಬಿದ್ದಿದ್ದಳು.


ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಮೂಡಿಬಂದಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು