7:42 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೂಡಿಗೆರೆ: ಸೆ.4ರಂದು 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ

27/08/2026, 18:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಸಾಪ ಮಹಿಳಾ ಘಟಕದ ವತಿಯಿಂದ ಸೆ.4ರಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 8.30 ಗಂಟೆಗೆ ರಾಷ್ಟçಧ್ವಜಾರೋಹಣವನ್ನು ಶಾಸಕಿ ನಯನಾ ಮೋಟಮ್ಮ, ಪರಿಷತ್ತಿನ ಧ್ವಜಾರೋಹಣ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ನಾಡ ಧ್ವಜಾರೋಹಣವನ್ನು ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ನೆರವೇರಲಿದ್ದಾರೆ. 10ಗಂಟೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಮ್ಮೇಳನಾಧ್ಯಕ್ಷೆ ಭಾಗ್ಯ ಲಕ್ಷ್ಮಣ್ ಗೌಡ ಅವರ ಮೆರವಣಿಗೆ ನಡೆಯಲಿದೆ. ನಂತರ ಮೈಸೂರಿನ ಸಾಹಿತಿ ಡಾ.ಲತಾ ರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಎಂಎಲ್‌ಸಿ ಗಾಯಿತ್ರಿ ಶಾಂತೇಗೌಡ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಾಜಿ ಸಚಿವೆ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಸ್ತ್ರೀ ಎಂದರೆ ಅಷ್ಟೇ ಸಾಕೇ ಗೋಷ್ಠಿ ನಡೆಯಲಿದ್ದು, ಉದ್ಘಾಟನೆಯನ್ನು ಜಿ.ಪಂ. ಸಿಇಒ ಎಚ್.ಎಸ್.ಕೀರ್ತನಾ ನೆರವೇರಿಸಲಿದ್ದಾರೆಂದು ಹೇಳಿದರು.
ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜು ಪ್ರಾಂಶುಪಾಲ ಡಾ. ಪುಷ್ಪಭಾರತಿ ಅಧ್ಯಕ್ಷತೆಯಲ್ಲಿ ಅಮರ ಸ್ವರ ಎಸ್.ಜಾನಕಿ ಅವರಿಗಾಗಿ ಗಾನನಮನ ಗೋಷ್ಠಿ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕಳಸದ ಡಾ.ಜಾನಕಿ ಸುಂದ್ರೇಶ್, ಚಿಕ್ಕಮಗಳೂರಿನ ಡಾ.ನಾಗಶ್ರೀ ತ್ಯಾಗರಾಜ್, ತರಿಕೆರೆಯ ಡಾ.ನಾಗಜ್ಯೋತಿ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪುರಸ್ಕಾರ, ಜಿಲ್ಲೆಯ ಎಲ್ಲಾ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಿಗೆ ಕನ್ನಡಶ್ರೀ ಪ್ರಶಸ್ತಿ ಹಾಗೂ ಎಲ್ಲಾ ತಾಲೂಕಿನಲ್ಲಿ ಕನ್ನಡದ ಕೆಲಸ ಮಾಡುತ್ತಿರುವವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಸಾಹಿತ್ಯಾಸಕ್ತಿ, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.


ಗೋಷ್ಠಿಯಲ್ಲಿ ಕಸಾಪ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಕಾ ರವಿರಾಜ್, ಲೇಖಕರ ಬಳಗದ ಅಧ್ಯಕ್ಷೆ ಪ್ರೇಮಾ ಪುಣ್ಯಮೂರ್ತಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು