10:35 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ | ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ಮನೆ ಸಂಪೂರ್ಣ ಜಖಂ

05/07/2026, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ಬಡವನಡಿಣ್ಣೆ ನಿವಾಸಿ, ಪರಿಶಿಷ್ಟ ಜಾತಿಗೆ ಸೇರಿದ ಜಾನಕಿ ಸಿದ್ಧಪ್ಪ ಅವರ ಮನೆಗೆ ರಾತ್ರಿ ಸುರಿದ ಭಾರಿ ಗಾಳಿ-ಮಳೆಯ ವೇಳೆ ಬೃಹತ್ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಗೊಳಗಾಗಿದೆ.

ಘಟನೆಯಲ್ಲಿ ಮನೆಯು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಟ್ಟಗೆರೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಮೌಲ್ಯಮಾಪನ ಕಾರ್ಯ ಕೈಗೊಂಡಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು