8:07 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮೂಡಿಗೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು: ಇನ್ನೊರ್ವ ಗಂಭೀರ, ಹಲವರಿಗೆ ಗಾಯ

29/08/2025, 14:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ -ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್ ಸುಮತಿ ದಂಪತಿ ಪುತ್ರ ಅಕ್ಷಯ್ (22) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ವಿಕಾಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಣಕಲ್ ಮೂಡಿಗೆರೆ ನಡುವಿನ ಹೊರಟ್ಟಿ ಗ್ರಾಮದ ಚಿಂತನ್ ಹಿಟ್ಟಿನ ಗಿರಣಿ ಬಳಿ ಈ ದುರ್ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ಮತ್ತು ಬೆಂಗಳೂರು ಕಡೆಯಿಂದ ಹೊರನಾಡು ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಮೃತ ಅಕ್ಷಯ್ ಮತ್ತು ಗಂಭೀರವಾಗಿ ಗಾಯಗೊಂಡ ವಿಕಾಸ್ ಇವರುಗಳು ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಇದ್ದರು. ಬೆಂಗಳೂರು ಮೂಲದ ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲಾಗಿದೆ. ಗಾಯಗೊಂಡವರನ್ನು ಗಂಗಯ್ಯ, ಹರ್ಷ, ವಿಜಯ ಎಂದು ಗುರುತಿಸಲಾಗಿದೆ.

*ಅಕ್ಷಯ್:* ಮೃತ ಅಕ್ಷಯ್ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಅಕ್ಷಯ್ ರಾಜಕೀಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಅಗ್ರಿ ಕಂಪನಿಯೊಂದರಲ್ಲಿ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಕ್ಷಯ್ ಒಂದು ವಾರದ ಹಿಂದಷ್ಟೇ ಇಕೋ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದರು ಎಂದು ತಿಳಿದುಬಂದಿದೆ.
ರಸ್ತೆಯಲ್ಲಿ ನೀರು ನಿಂತಿದ್ದ ಅವಘಡಕ್ಕೆ ಕಾರಣವಾಗಿದೆ.
ಅಪಘಾತ ನಡೆದ ಸ್ಥಳವು ನೇರವಾದ ರಸ್ತೆಯಾಗಿದೆ. ಆದರೂ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇಲ್ಲಿ ಚರಂಡಿ ನೀರು ರಸ್ತೆಯಲ್ಲಿ ನಿಲ್ಲುತ್ತಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. ವೇಗವಾಗಿದ್ದ ಕಾರಿಗೆ ಬ್ರೇಕ್ ಹಾಕಿದಾಗ ರಸ್ತೆಯಲ್ಲಿ ನೀರಿದ್ದ ಕಾರಣ ನಿಯಂತ್ರಣ ತಪ್ಪಿ ಮತ್ತೊಂದು ಬದಿಗೆ ಬಂದಿದ್ದು, ಎದುರಿನಿಂದ ಬರುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣವಾಗಿದೆ ಸಾರ್ಜಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವತ್ತಿನ ಬಡವನದಿಣ್ಣೆ ರಸ್ತೆ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ರಸ್ತೆ ಬದಿಯಲ್ಲಿ ನೀರು ಹರಿದು ಹೋಗದೆ ರಸ್ತೆಯಲ್ಲಿ ನೀರು ನಿಲ್ಲುವ ಪರಿಣಾಮ .ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದರ ಸಂಪೂರ್ಣ ಜವಾಬ್ದಾರಿ ಆಗಿರುತ್ತಾರೆ. ಸಂಬಂಧ ಪಟ್ಟ ಕಾಮಗಾರಿ ಮಾಡಿದ ಗುತ್ತಿಗೆದಾರರು ಮಾಡಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಮೇಲ್ಗಡೆ ಗದ್ದೆಯಿಂದ ಬರುವ ನೀರು ಮಳೆಯಿಂದ ತುಂಬಿರುತ್ತೆ, ನೀರು ಹರಿದು ಹೋಗುವುದಕ್ಕೆ ಸರಿಯಾದ ಚರಂಡಿ ಜೊತೆಗೆ ಮೋರಿಗಳ ಕೆಲಸ ಆಗಿಲ್ಲ ಅವೈಜ್ಞಾನಿಕ ಕಾಮಗಾರಿ  ಎದ್ದು ಕಾಣುತ್ತದೆ. ಸ್ಥಳೀಯ ಸಂಸದರು ಇದರ ಬಗ್ಗೆ ಹ್ಯಾಂಡಪೋಸ್ಟ್ ನಿಂದ ಕೊಟ್ಟಿಗೆಹಾರದ ತನಕ ರಸ್ತೆ ಗುಣಮಟ್ಟ ಹಾಗೂ ರಸ್ತೆ ಬದಿಯ ಚರಂಡಿ ವ್ಯವಸ್ಥೆಗಳ ಬಗ್ಗೆ ನಿಗಾ ವಹಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸ ಬೇಕೆಂದು ನೊಂದ ಪಾಲಕರ ಪರವಾಗಿ ಮೂಡಿಗೆರೆ ಹಂಡುಗುಳಿಯ ಜಗದೀಪ್. ಕೆ. ಎಂ. ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು