6:26 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಮೂಡಿಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ; ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ

17/03/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರತ್ನ,ಪವರ ಸ್ಟಾರ್  ದಿ ಪುನೀತ್ ರಾಜ್ ಕುಮಾರ್ ಅವರ 47ನೇ ವರ್ಷದ ಹುಟ್ಟು ಹಬ್ಬವನ್ನು ಮೂಡಿಗೆರೆ ತಾಲೂಕಿನ ಸುಂಕಸಾಲೆ ಮತ್ತು ದುರ್ಗದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳೂರು ಹೋಬಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಯುವ ಮೋರ್ಚಾ ಅಧ್ಯಕ್ಷ ಅಜಿತ್ ದುರ್ಗದಹಳ್ಳಿ ಕನ್ನಡಿಗರ ಪಾಲಿಗೆ ಪುನಿತ್ ಎಂದಿಗೂ ಅಜರಾಮರವಾಗಲಿದ್ದಾರೆ. ಅವರಿಗೆ ಕರ್ನಾಟಕ ರತ್ನ ಅರ್ಹವಾಗಿ ಸಂದಿದೆ ಎಂದರು.

ತಾಲೂಕು ರೈತ ಮೋರ್ಚಾ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ ಮಾತನಾಡಿ, ಪುನೀತ್ ನಟನಾಗಿ ಮಾತ್ರವಲ್ಲದೆ ಬಡವರಿಗೆ ಮತ್ತು ಚಿತ್ರರಂಗದವರಿಗೆ ಹಾಗೂ ಜನ ಸಾಮನ್ಯರಿಗೆ ಗೊತ್ತಿಲ್ಲದ ರೀತಿಯಲ್ಲಿ ಸಹಾಯ ಮಾಡುವ ಮೂಲಕ ನಿಜವಾದ ಹೀರೋ ಎನಿಸಿದ್ದಾರೆ. ಅವರಿಗೆ ಕೂಡಲೇ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಆದೇಶ್ ದುರ್ಗದಹಳ್ಳಿ, ಸತ್ಯಂದ್ರ ಮುಂತಾದವರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು