11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ

19/07/2025, 12:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ.


ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ನಿಯಂತ್ರಣ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. 26ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂ.ಎನ್.ಸಿ. ಕಂಪನಿಯಲ್ಲಿ ಕೆಲಸ ಮಾಡುವ ಯುವಕ-ಯುವತಿಯರು. ವೀಕ್ ಎಂಡ್ ಹಿನ್ನೆಲೆ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸದೆ. ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್, ವಿನಯ್, ಜಲಿಲ್ ,ವರುಣ್ ಸೇರಿದಂತೆ ಸ್ಥಳಿಯ ಯುವಕರು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು