ಇತ್ತೀಚಿನ ಸುದ್ದಿ
ಮೂಡಿಗೆರೆ: ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ದಾರುಣ ಸಾವು
03/07/2022, 02:11
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಸ್ ಡಿಪೋ ಹತ್ತಿರ ರಸ್ತೆಯಲ್ಲಿ ನಿಲ್ಲಿಸಿದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಬೈಕ್ ಸವಾರ ರಕ್ಷಿತ್ (25) ಎಂದು ಗುರುತಿಸಲಾಗಿದೆ. ಗೋಣಿಬೀಡ್ ಮೂಲದ ಯುವಕ ಬಣಕಲ್ ಕಡೆಯಿಂದ ಗೋಣಿಬೀಡ್ ಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆಯಿತು.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.