10:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಪ್ಪರ್ ಗೆ ಸೈಡ್ ಕೊಡಲು ಹೋಗಿ ಹಳ್ಳಕ್ಕೆ ಬಿದ್ದ ಮಂಗಳೂರಿನ ಕಾರು; ಇಬ್ಬರಿಗೆ ಗಾಯ

11/03/2024, 14:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ.
ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ವೇಗವಾಗಿ ಬರುತ್ತಿದ್ದ ಕಾರಿಗೆ ಏಕಾಏಕಿ ಟಿಪ್ಪರ್ ಲಾರಿ ಎದುರಾಗಿದ್ದು, ಅಪಘಾತವನ್ನು ತಪ್ಪಿಸಲು ಕಾರಿನ ಚಾಲಕ ಬ್ರೇಕ್ ಒತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಳೆಗೆ ಉರುಳಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಪೆಟ್ಟಾಗಿದ್ದು, ಕಾರು ಜಖಂಗೊಂಡಿದೆ. ಬೇಸಿಗೆ ಆಗಿರುವುದರಿಂದ ಹೊಳೆಯಲ್ಲಿ ಹೆಚ್ಚಿನ ನೀರು ಇಲ್ಲದಿದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ತಕ್ಷಣ ಸ್ಥಳೀಯರು ನೆರವಿಗೆ ಬಂದು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ಕಾರು ಮಂಗಳೂರು ಮೂಲದ್ದು ಎಂದು ತಿಳಿದುಬಂದಿದ್ದು, ಹಾಸನದಿಂದ ಬೇಲೂರು ಗೆಂಡೇಹಳ್ಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದು ಎನ್ನಲಾಗಿದೆ.
ಬೊಮ್ಮೇನಹಳ್ಳಿ ಸಮೀಪ ಹರಿಯುತ್ತಿರುವ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆ ಬಹಳ ಕಿರಿದಾಗಿದ್ದು, ಅಲ್ಲಿ ವಾಹನಗಳು ಏಕಾಏಕಿ ಎದುರಾದಾಗ ಪರಸ್ಪರ ರಸ್ತೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಸೇತುವೆ ತುಂಬಾ ಕಿರಿದಾಗಿದ್ದು, ಶಿಥಿಲವಾಗಿದೆ. ಸೇತುವೆಗೆ ಯಾವುದೇ ತಡೆಗೋಡೆಯನ್ನು ನಿರ್ಮಾಣ ಮಾಡಿಲ್ಲ. ಏಕಕಾಲದಲ್ಲಿ ಎರಡು ವಾಹನಗಳು ಎದುರಾದಾಗ ತುಂಬಾ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಈ ಸೇತುವೆ ಈಗಿನ ವಾಹನ ದಟ್ಟಣೆಗೆ ಸೂಕ್ತವಾಗಿಲ್ಲ. ಮಳೆಗಾಲದಲ್ಲಿ ಹೊಳೆಯ ನೀರು ಸೇತುವೆಯ ಮೇಲೆಯೇ ಉಕ್ಕಿ ಹರಿಯುತ್ತದೆ. ಜೊತೆಗೆ ಈ ಸೇತುವೆ ತಿರುವಿನಲ್ಲಿ ಇರುವುದರಿಂದ ಎದುರಿನಿಂದ ಬರುವ ವಾಹನಗಳ ಸೂಚನೆಯೂ ತಿಳಿಯುವುದಿಲ್ಲ.
ಹಾಗಾಗಿ ಈ ಸೇತುವೆಯನ್ನು ಅಗಲೀಕರಣಗೊಳಿಸಿ ತಡೆಗೋಡೆ ಸಹಿತ ಉತ್ತಮ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಲೇ ಬುರತ್ತಿದ್ದಾರೆ. ಆದರೆ ಇದರ ಬಗ್ಗೆ ಜನಪ್ರಿತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ಈ   ಸೇತುವೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸ್ಥಳೀಯ ಮೂಡಿಗೆರೆ ಶಾಸಕರು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು