ಇತ್ತೀಚಿನ ಸುದ್ದಿ
ಮೂಡಿಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ದಾರುಣ ಸಾವು; ಮೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ
01/06/2022, 15:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗಲಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದನ ಮೇಯಿಸುತ್ತಿದ್ದ ತಿಮ್ಮಪ್ಪ (55) ಎಂದು ಗುರುತಿಸಲಾಗಿದೆ. ದನಗಾಹಿ ತಿಮ್ಮಪ್ಪನ ಜೊತೆ ಅವರ ಎರಡು ದನಗಳು ಸಾವನ್ನಪ್ಪಿವೆ.
ಮೆಸ್ಕಾಂ ಸಿಬ್ಬಂದಿಗಳ ವಿರುದ್ಧ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.