2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮುಡಿಪು: ಕಾರು ಅಪಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಸಾವು; ಅತಿವೇಗವೇ ದುರಂತಕ್ಕೆ ಕಾರಣ?

27/12/2022, 18:42

ಉಳ್ಳಾಲ(reporterkarnataka.com): ರಸ್ತೆ ಬದಿ ನಿಂತಿದ್ದ 8ನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಮುಡಿಪುನಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಈತ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಡಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಡಿಕ್ಕಿ ಹೊಡೆದಿದೆ.

ಕಾರು ಮಾಲೀಕ ಟ್ರಯಲ್ ನೋಡಲು ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು