7:36 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಮೂಡುಬಿದರೆ: ಬಾವಿಗೆ ಹಾರಿದ ಯುವತಿಯ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ

12/10/2022, 10:50

ಮೂಡುಬಿದಿರೆ(reporterkarnataka.com):ಇಲ್ಲಿನ ವಿಶಾಲನಗರದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು, ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ್ದಾರೆ.
ವಿಶಾಲ್ ನಗರದ ನಿವಾಸಿ ತಮಿಳುನಾಡು ಮೂಲದ ರಾಬಿತ್ ಎಂಬವರ ಪುತ್ರಿ ನಿವೇತಾ(22) ಬಾವಿಗೆ ಹಾರಿದ ಯುವತಿ ಎಂದು ಗುರುತಿಸಲಾಗಿದೆ.

ಯುವತಿ ಮಂಗಳವಾರ ಬೆಳಗ್ಗೆ ಬಾವಿಗೆ ಹಾರಿದ್ದಾರೆ. ಅಕ್ಕಪಕ್ಕದವರು ಇದನ್ನು ನೋಡಿ ಮೂಡುಬಿದಿರೆ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಸ್ಟೀಫನ್ ಡಿ’ಸಿಲ್ವ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಚಾಲಕ ಕಿರಣ್ ಕುಮಾರ್ ಎಸ್., ಸಿಬ್ಬಂದಿಗಳಾದ ನವೀನ್ ರಾಜ್, ಪ್ರವೀಣ್ ಕುಮಾರ್ ದೊಡ್ಮನಿ, ಪುಂಡಲೀಕ, ಗೃಹರಕ್ಷಕ ದಳದ ಸಿಬಂದಿಗಳಾದ ಲತೀಶ್, ಸನ್ಮತ್, ಸುದರ್ಶನ್ ಅವರು ಯುವತಿಯನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ನಿವೇತಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು