6:04 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮೂಡುಬಿದಿರೆ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

28/08/2023, 14:12

ಮೂಡುಬಿದರೆ(reporterkarnataka.com): ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.


ಜನಜಾಗ್ರತಿ ವೇದಿಕೆಯ ಮೂಡುಬಿದಿರೆ ವಲಯ ಅಧ್ಯಕ್ಷರಾದ ಜೊಸ್ಸಿ ಮಿನೇಜಸ್ ಅಧ್ಯಕ್ಷತೆ ವಹಿಸಿದರು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ತಾನು ಮಾತ್ರ ನರಕಯಾತನೆ ಅನುಭವಿಸಿದರೆ ದುಶ್ಚಟ ಇರುವ ವ್ಯಕ್ತಿಯ ಮನೆಯಲ್ಲಿ ಎಲ್ಲರೂ ನರಕಯಾತನೆ ಅನುಭವಿಸಬೇಕಾಗುತ್ತದೆ. ಇಂತಹ ದುಶ್ಚಟದ ದಾಸರಾಗದೇ ಜೀವನದಲ್ಲಿ ಉನ್ನತ ಸಾಧನೆ ಮಾಡಿ ಈ ಸಮಾಜಕ್ಕೆ ಕೀರ್ತಿ ತರುವಂತಹ ವ್ಯಕ್ತಿಗಳು ನೀವಾಗಬೇಕು ಇದೆಲ್ಲವೂ ಮದ್ಯವ್ಯಸನಿಯ ಮನಪರಿವರ್ತನೆಯಿಂದ ಮಾತ್ರ ಸಾಧ್ಯ ಎಂದರು. ತಾಲೂಕು ಯೋಜನಾಧಿಕಾರಿ ಸುನಿತಾ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಗತಿ ಬಂಧು ಒಕ್ಕೂಟದ ವಲಯ ಅಧ್ಯಕ್ಷರಾದ ಶ್ರೀಯುತ ಅರುಣ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖೋಪಧ್ಯಾಯ ಶ್ರೀಯುತ ಮುನಿರಾಜ್ ರೆಂಜಾಳ ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದುಷ್ಟಟಗಳಿಂದ ದೂರವಿರುವ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ. ಇಂದಿನ ಯುವಜನತೆ ಒಳ್ಳೆಯ ಹವ್ಯಾಸಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕನಾಗಿ ಹೊರಹೊಮ್ಮಬೇಕು. ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟ ದುರಭ್ಯಾಸದ ದಾಸರಾಗದೆ ತಂದೆ ತಾಯಿಯವರು ಕಂಡಿರುವ ಕನಸನ್ನು ನನಸು ಮಾಡಲು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂಡುಬಿದಿರೆ ವಲಯದ ಮೇಲ್ವಿಚಾರಕರಾದ ಮಮತಾ, ಮೂಡುಬಿದಿರೆ ವಲಯ ಪ್ರಾಂತ್ಯ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ಅನುಪಮಾ, ಮೂಡುಬಿದಿರೆ ವಲಯ ಜ್ಯೋತಿನಗರ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರಮಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಗಣಕಯಂತ್ರ ವಿಜ್ಞಾನ ಉಪನ್ಯಾಸಕಿ ನವಿತಾ ವಂದನಾರ್ಪಣೆ ಸಲ್ಲಿಸಿದರು.
– ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್

ಇತ್ತೀಚಿನ ಸುದ್ದಿ

ಜಾಹೀರಾತು