5:20 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ ನಾಯಕರ ಸೂತ್ರ

18/03/2024, 21:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಮಂಡಲದ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಅವರು ಇಂದು ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.
ಬಿಜೆಪಿ ಮೂಡಿಗೆರೆ ಮಂಡಲದ ಬಣಕಲ್ ಹೋಬಳಿ ಅಧ್ಯಕ್ಷ ಪಿ.ಜಿ. ಅನುಕುಮಾರ್ (ಪಟ್ಟದೂರು ಪುಟ್ಟಣ್ಣ) ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರನ್ನು ಇತ್ತೀಚೆಗೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಈ ಅಮಾನತು ಆದೇಶವನ್ನು ಪಕ್ಷದ ಜಿಲ್ಲಾಧ್ಯಕ್ಷರು ವಾಪಾಸ್ಸು ಪಡೆದಿದ್ದಾರೆ.
ಮೂಡಿಗೆರೆ ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಉಂಟಾದ ಗೊಂದಲ, ಪಕ್ಷದ ಅಧ್ಯಕ್ಷರನ್ನಾಗಿ ಟಿ.ಎಂ. ಗಜೇಂದ್ರ ಅವರನ್ನು ನೇಮಕ ಮಾಡಿದ ಸಂದರ್ಭದಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದ ಅನುಕುಮಾರ್ ಮತ್ತು ಭರತ್ ಅವರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ತಾಪಂ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರ ಮೇಲೆ ಅನುಕುಮಾರ್ ಮತ್ತು ಭರತ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಘಟನೆಯ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಅಶಿಸ್ತಿನ ಕಾರಣ ನೀಡಿ ಅನುಕುಮಾರ್ ಮತ್ತು ಭರತ್ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಯಾವುದೇ ನೋಟೀಸ್ ನೀಡದೇ ಏಕಾಏಕಿ ಅಮಾನತು ಮಾಡಲಾಗಿದೆ ಎಂದು ಮುಖಂಡರು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದಿದ್ದರು. ಮಾತ್ರವಲ್ಲ ಇವರ ಬೆಂಬಲಿಗರು ಸಹ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದರು.
ಮಾರ್ಚ್ 15ರಂದು ಏರ್ಪಡಿಸಲಾಗಿದ್ದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ದಿನವೇ ಅನುಕುಮಾರ್ ಮತ್ತು ಭರತ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಭಿಮಾನಿ ಕಾರ್ಯಕರ್ತರ ಹೆಸರಿನಲ್ಲಿ ಪರ್ಯಾಯ ಸಮಾವೇಶ ಮಾಡಿದ್ದರು. ಈ ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಗೊಂದಲದಿಂದಾಗಿ ಅಂದು ನಿಗದಿಯಾಗಿದ್ದ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿತ್ತು. ಗೊಂದಲ ನಿವಾರಣೆಗೆ ಮುಖಂಡರು ಆಸಕ್ತಿ ತೋರಿ ಮುಂದಿನ ದಿನಗಳಲ್ಲ ಒಟ್ಟಾಗಿ ಸೇರಿ ಪದಗ್ರಹಣ ಸಮಾರಂಭ ಏರ್ಪಡಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಸ್ಪರ ಮುನಿಸಿಕೊಂಡಿದ್ದ ಎರಡೂ ಗುಂಪಿನ ನಾಯಕರ ನಡುವೆ ರಾಜಿಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. ಅದರ ಪರಿಣಾಮ ಇಂದು ಜಿಲ್ಲಾಧ್ಯಕ್ಷರು ಅಮಾನತು ಆದೇಶವನ್ನು ವಾಪಾಸ್ಸು ಪಡೆದಿದ್ದಾರೆ.
ಇದರೊಂದಿಗೆ ಮೂಡಿಗೆರೆ ಮಂಡಲ ಬಿಜೆಪಿಯಲ್ಲಿ ಉಂಟಾಗಿದ್ದ ಗೊಂದಲ ಒಂದು ಹಂತಕ್ಕೆ ತಣ್ಣಗಾಗುವ ಲಕ್ಷಣಗಳು ಕಂಡುಬರುತ್ತಿವೆ.
ಅಮಾನತು ವಾಪಾಸ್ಸು ಪಡೆದಿರುವ ಆದೇಶ ಇನ್ನೂ ನಮಗೆ ಅಧಿಕೃತವಾಗಿ ತಲುಪಿಲ್ಲ. ಪಕ್ಷದ ಹಿರಿಯ ಮುಖಂಡರಾದ ಎಂ.ಕೆ.ಪ್ರಾಣೇಶ್ ಅವರು, ಸಿ.ಟಿ.ರವಿಯವರು ಕರೆದು ಮಾತನಾಡಿದ್ದಾರೆ. ಅವರ ಮಾರ್ಗದರ್ಶನದಂತೆ ಮತ್ತು ಬೆಂಬಲಿಗರ ಅಭಿಪ್ರಾಯದಂತೆ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಹೋಗಲು ತೀರ್ಮಾನವಾಗಿದೆ. ಈ ಹಿಂದೆ ಮಾಜಿ ಶಾಸಕರ ಜೊತೆ ಜೆ.ಡಿ.ಎಸ್. ಗೆ ಹೋಗಿರುವ ಮುಖಂಡರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬೇಕು. ಪದಗ್ರಹಣ ಸಮಾರಂಭ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಅವರುಗಳ ಉಪಸ್ಥಿತಿಯಲ್ಲಿ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದೇವೆ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು
ಪಿ.ಜಿ. ಅನುಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು