10:00 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್: ಗಾಢ ನಿದ್ದೆಯಲ್ಲಿ ಅರಣ್ಯ ಅಧಿಕಾರಿಗಳು

01/09/2024, 11:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ 9 ಗುಡ್ಡ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್ ಗಳಲ್ಲಿ ರಾಲಿ ನಡೆದಿದ್ದು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ. ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನಭುಜ ದಟ್ಟಾರಣ್ಯ ರಸ್ತೆಯಲ್ಲಿ ಫೋರ್ ವೀಲ್ ಡ್ರೈವ್ ಮೋಟಾರು ರಾಲಿ ನೆಡೆಯುತ್ತಿದೆ.
ನೂರಕ್ಕೂ ಹೆಚ್ಚು ವಾಹನಳು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೋಗುತ್ತಿವೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಗುಪ್ತವಾಗಿ ರ್‍ಯಾಲಿ ಆಯೋಜಿಸಲಾಗಿದೆ. ಈ ಕುರಿತು ಮೂಡಿಗೆರೆ ವಲಯ ಅರಣ್ಯಾಧಿಕಾರಿಯಾಗಲೀ ಅಥವಾ ತಳಮಟ್ಟದ ಸಿಬ್ಬಂದಿಗಳಾಗಲೀ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅರಣ್ಯ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದಾಗಿ, ಸಕಲೇಶಪುರ, ಚಿಕ್ಕಮಗಳೂರು, ಮೂಡಿಗೆರೆ ತಾಲ್ಲೂಕಿನ ಜನರು ಮೋಜಿನ ಕ್ರೀಡೆಯಲ್ಲಿ ಭಾಗಿಯಾಗುವುದರ ಮೂಲಕ ಅರಣ್ಯ ಕಾನೂನುಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅತೀವೇಗದ ವಾಹನಗಳ ಸದ್ದು ವನ್ಯಜೀವಿಗಳಿಗೆ ಕಂಟಕವಾಗಲಿದೆ. ಈ ಭಾಗವು ಆನೆ ಕಾರಿಡಾರ್ ಆಗಿದ್ದು, ಆನೆಗಳು ಅಕ್ಕಪಕ್ಕದ ಹಳ್ಳಿಗಳಿಗೆ ನುಗ್ಗುವ ಸಾಧ್ಯತೆ ಇದೆ. ಅಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ತನಗೂ ಇದಕ್ಕೂ ಸಂಬಂಧವೇ ಇಲ್ಲದಂತಿದ್ದಾರೆ. ತುರ್ತಾಗಿ ವಾಹನಗಳನ್ನು ಜಪ್ತು ಮಾಡಿ, ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದವರ ಮೇಲೆ ಕಠಿಣ ಕ್ರಮ ಜರುಗಿಸಲು ಪರಿಸರ ಪ್ರೇಮಿಗಳು ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ.


ಉಳ್ಳವರ ಮಕ್ಕಳ ಮೋಜಿನಟಕ್ಕೆ ಪರಿಸರ ಹಾಗೂ ಕಾಡುಪ್ರಾಣಿಗಳ ಆವಾಸಸ್ಥಾನಕ್ಕೆ ದಕ್ಕೆ ಪ್ರಭಾವಿ ರಾಜಕಾರಣಿ ಮಗ ರಾ ಲಿಯಲ್ಲಿ ಭಾಗಿ ಬಾಳೂರು ಮೀಸಲಾ ಅರಣ್ಯದ ಬೈರಾಪುರ ಎತ್ತಿನಬುಜ 9 ಗುಡ್ಡ ಮೊದಲಾದ ಸ್ಥಳಗಳಲ್ಲಿ ಶ್ರೀಮಂತರ ಮಕ್ಕಳು ಹಾಗೂ ರಾಜಕಾರಣಿಗಳ ಮಕ್ಕಳು ಜೀಪ್ ರ್ಯಾಲಿ ನಡೆಸಿದ್ದು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಈ ಜೀಪ್ ರಾಲಿಯಲ್ಲಿ ಪ್ರಭಾವಿ ರಾಜಕಾರಣಿಯ ಮಗ ಭಾಗವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ ಈ ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ವಾಹನಗಳ ಕರ್ಕಶಬ್ದದಿಂದ ಊರಿಗೆ ಬರುವ ಸಂಭವವಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
*ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿದ ಜೀಪ್ ಮಾಲೀಕರು:*
ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ರ್ಯಾಲಿಗೆ ಬಂದ 80ಕ್ಕೂ ಹೆಚ್ಚು ಜೀಪ್ಗಳು ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿದ್ದು ಕಂಡು ಬಂತು ವಾಹನದ ಮೂಲ ಸ್ವರೂಪವನ್ನು ಬದಲಾಯಿಸಬಾರದೆಂಬ ನಿಯಮವಿದ್ದರೂ ಜೀಪ್ ಮಾಲೀಕರು ಮೂಲ ಸ್ವರೂಪವನ್ನು ಬದಲಾಯಿಸಿ ರ್ಯಾಲಿಗೆ ಭಾಗವಹಿಸಿದ್ದು ಕಂಡು ಬಂತು ಕರ್ಕಶ ಶಬ್ದದೊಂದಿಗೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ವಾಹನಗಳು ಓಡಾಡಿದ್ದರಿಂದ ಪ್ರಾಣಿಗಳು ದಿಕ್ಕಾಪಾಲಾಗಿ ಓಡಿ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು