10:23 PM Saturday24 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು