ಇತ್ತೀಚಿನ ಸುದ್ದಿ
ಮೂಡಿಗೆರೆ ಬಳಿ ಹೊಂಡಕ್ಕೆ ಬಿದ್ದ ಪ್ರವಾಸಿಗರಿದ್ದ ಟಿಟಿ ವಾಹನ: ಹೊರನಾಡಿಗೆ ತೆರಳುತ್ತಿದ್ದ 4 ಮಂದಿಗೆ ತೀವ್ರ ಗಾಯ
23/12/2024, 11:44
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ
ಪ್ರವಾಸಿಗರಿಂದ ಟಿ.ಟಿ. ವಾಹನವೊಂದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರಿದ್ದ ವಾಹನ ಪಲ್ಟಿಯಾಗಿತ್ತು. ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.