6:49 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಚಾಲಕನ ನಿರ್ಲಕ್ಷ್ಯ: 1 ಕಿಮೀ. ಬೈಕನ್ನು ಎಳೆದೊಯ್ದ ಲಾರಿ: ಓರ್ವ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

14/11/2023, 10:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮಬ
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಎದುರು ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ.
ಬೈಕ್ ಸವಾರ ಮಂಜುನಾಥ್ (30) ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ತಂದೆ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕ ಮಂಜುನಾಥ್ ಸ್ಥಳದಲ್ಲೇ ಸಾವು. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತ ಯುವಕ ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿಯಾಗಿದ್ದಾರೆ.
ಲಾರಿ ಚಾಲಕನ ಅವಸರದಿಂದಲೇ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ.
ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು