ಇತ್ತೀಚಿನ ಸುದ್ದಿ
ಮೂಡಿಗೆರೆ: ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ; 3 ಮಂದಿ ಆಸ್ಪತ್ರೆಗೆ
24/11/2022, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾವೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ 3 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿವೆ
ಆಟೋದಲಿದ್ದ ಮೂವರಿಗೆ ಹೆಚ್ಚಾಗಿ ಪೆಟ್ಟಾಗಿದ್ಫು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಿದರಹಳ್ಳಿ ಪಟ್ಟಣದಲ್ಲಿ ಅಪಘಾತ ನಡೆದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.