ಇತ್ತೀಚಿನ ಸುದ್ದಿ
ಮೂಡಿಗೆರೆ: ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ಶಾಕ್ ಹೊಡೆದು 3 ಮಂದಿ ಸಾವು; 6 ಮಂದಿ ಗಂಭೀರ
07/09/2022, 16:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಇಬ್ಬರು ಮಹಿಳೆಯರು ಸೇರಿದಂತೆ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ತಗುಲಿದ ವಿದ್ಯುತ್ ತಂತಿಯಿಂದ ಶಾಕ್ ಹೊಡೆದು ರಾಜು (47) ರಚನಾ (35) ಹಾಗೂ ಪಾರ್ವತಿ (26) ಎಂಬವರು ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡ 6 ಮಂದಿಯನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದೆ.ಗಂಭೀರ ಗಾಯಗೊಂಡ ಸಂಗೀತ, ಪಲ್ಲವಿ ಹಾಸನಕ್ಕೆ ಸ್ಥಳಾಂತರಿಸಲಾಗಿದೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.