ಇತ್ತೀಚಿನ ಸುದ್ದಿ
ಮೂಡಿಗೆರೆ ಗುತ್ತಿಹಳ್ಳಿ: ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ; ಸೂಕ್ತ ಪರಿಹಾರಕ್ಕೆ ಸಂತ್ರಸ್ತ ರೈತ ಆಗ್ರಹ
17/05/2023, 17:39
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿ, ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಯೊಂದು
ಬೆಳೆಯಲಾಗಿದ್ದ ಫಸಲನ್ನು ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುತ್ತಿಹಳ್ಳಿ ಗ್ರಾಮದ ಪ್ರವೀಣ್ ಎಂಬುವ ಮೂಡಿಗೆರೆ ತಾಲ್ಲೂಕಿನ ಗುತ್ತಿ ಹಳ್ಳಿರಿಗೆ ಸೇರಿದ್ದ ತೋಟದಲ್ಲಿ ಸಾಲ ಮಾಡಿ ಬೆಳೆ ಬೆಳೆಸಿದ್ದರು.
ಸಾಲ ಮಾಡಿ ಬೆಳೆದಿದ್ದ ರೈತ ಈಗ ಕಂಗಾಲಾಗಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ರೈತ ಪ್ರವೀಣ್ ಒತ್ತಾಯ ಮಾಡಿದ್ದಾರೆ.
ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರಿಂದ ಒತ್ತಾಯ ಕೇಳಿ ಬಂದಿದೆ.