5:06 AM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೂಡಿಗೆರೆ: ಹಾಡಹಗಲೇ ಗದ್ದೆ, ತೋಟದಲ್ಲಿ ಸುತ್ತಾಡುತ್ತಿರುವ ಕಾಡಾನೆ; ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಸೂಚನೆ

04/08/2023, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಗ್ರಾಮದ ಗದ್ದೆ, ತೋಟಗಳಲ್ಲಿ ಅತ್ತಿಂದಿತ್ತ ಸುತ್ತಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕಸೃಷ್ಟಿಸಿದೆ.
ಬಡವನದಿಣ್ಣೆಯಲ್ಲಿ ಹಾಡಹಗಲೇ ಕಾಡಾನೆಗಳ ಓಡಾಟ ನಡೆಸುತ್ತಿವೆ.ಗ್ರಾಮದ ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಸುತ್ತುತ್ತಿವೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬಡವನದಿಣ್ಣೆ ಮೂಡಿಗೆರೆ ಕೊಟ್ಟಿಗೆಹಾರ ಮುಖ್ಯ ರಸ್ತೆ ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದೆ. ಹಾಗಾಗಿ ಆನೆಗಳು ಮುಖ್ಯರಸ್ತೆಗೆ ಬರುವ ಆತಂಕ ಎದುರಾಗಿದೆ.
ನಿನ್ನೆ ರಾತ್ರಿಯಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿವೆ. ರೈತರ ಕಾಫಿತೋಟಗಳನ್ನು ಪುಡಿಮಾಡುತ್ತಿವೆ. ಇದರಿಂದ ರೈತರು ತೀವ್ರ ನಷ್ಟಕ್ಕೆ ಒಳಗಾಗುತ್ತಿದ್ದಾರೆ.
ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಕಾಡಾನಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಆನೆಗಳು ಸ್ಥಳವನ್ನು ಬಿಟ್ಟು ಕದಲುತ್ತಿಲ್ಲ.
ಈ ಭಾಗದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು