ಇತ್ತೀಚಿನ ಸುದ್ದಿ
ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ
06/01/2025, 12:32
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.
ಮರ್ಕಲ್ ಗ್ರಾಮದ ನರೇಂದ್ರ ಗೌಡ ಅವರು ಹಸುವನ್ನು ತಮ್ಮ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅರ್ಧ ದೇಹವನ್ನು ತಿಂದು ಹಾಕಿದೆ. ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು. ಕರುವಿನ ಆಕ್ರಂಧನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್, ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.