ಇತ್ತೀಚಿನ ಸುದ್ದಿ
ಮೂಡಿಗೆರೆ: ಕಾಡು ಹಂದಿ ಉರುಳಿಗೆ ಸಿಲುಕಿ ಚಿರತೆ ಸಾವು; ತೋಟದ ಮಾಲೀಕ, ದುಷ್ಕರ್ಮಿಗಳ ವಿರುದ್ಧ ಕೇಸು ದಾಖಲು
07/02/2023, 21:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka @gmail.com
ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣ ಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು 3 ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೇ ಅಡಿ ದೂರದ ಅಂತರದಲ್ಲಿ ಚಿರತೆಯು ಉರುಳಿಗೆ ಬಿದ್ದಿದ್ದು ಈ ವೇಳೆ ಕೂಗಾಟವನ್ನು ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ರಾತ್ರಿಯೇ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದು ಉರುಳು ಕುತ್ತಿಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಡುವ ಹಂತಕ್ಕೆ ತಲುಪಿದ್ದು, ರಕ್ಷಣೆ ಮಾಡುವ ವೇಳೆಗೆ ಮೃತಪಟ್ಟಿದೆ. ಈ ಸಂಬಂಧ ತೋಟದ ಮಾಲೀಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದು. ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಶವವನ್ನು ಅಗ್ನಿಸ್ಪರ್ಷ ಮೂಲಕ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ.