ಇತ್ತೀಚಿನ ಸುದ್ದಿ
ಮೂಡಿಗೆರೆ: ಕಾಲೇಜು ಬಸ್ – ಗ್ಯಾಸ್ ಲಾರಿ ಮುಖಾಮುಖಿ ಡಿಕ್ಕಿ; ಬಸ್ ಚಾಲಕ ಆಸ್ಪತ್ರೆಗೆ
26/01/2023, 20:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಾಂ
ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್ ಹಾಗೂ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಾಲಕನಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯ ದಂತ ಕಾಲೇಜು ವಿದ್ಯಾರ್ಥಿಗಳಾಗಿದ್ದು ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ73 ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಅಪಘಾತ ನಡೆದಿದೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.