6:28 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಕಟ್ಟಡಕ್ಕೆ ಬೆಂಕಿ; ಶ್ರೀರಾಮ್ ಫೈನಾನ್ಸ್ ಕಚೇರಿಗೆ ಬಹುತೇಕ ಹಾನಿ

25/12/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾಗಿದೆ.
ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲೀಕರು ಮತ್ತು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ್ದಾರೆ.


ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಅಂತಿಮವಾಗಿ ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.
ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.
ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಚೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ.
ಕೆನರಾ ಬ್ಯಾಂಕ್ ಕಚೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.
ಈ ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು