2:59 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮದುವೆ ಸಮಾರಂಭದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು

13/11/2024, 22:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿವಾಹ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ಬುಧವಾರ ಘಟನೆ ನಡೆದಿದೆ.

ಬುಧವಾರ ಶಾಲಿಮಾರ್ ಹಾಲ್ ನಲ್ಲಿ ಮೂಡಿಗೆರೆ ತಾಲ್ಲೂಕಿನ ಬಂಕೇನಹಳ್ಳಿ ಗ್ರಾಮದ ವಧು ಮತ್ತು ಹ್ಯಾರಗುಡ್ಡೆ ಗ್ರಾಮದ  ವರನ ವಿವಾಹ ಕಾರ್ಯಕ್ರಮ ಏರ್ಪಾಡಾಗಿತ್ತು. ಈ ವೇಳೆ ವರನ ಕಡೆಯವರು ವಧುವಿಗೆ ನೀಡಿದ್ದ ಆಭರಣಗಳನ್ನು ಖದೀಮರು ಎಗರಿಸಿದ್ದಾರೆ. ಅಂದಾಜು ಮೂರು ಲಕ್ಷ ಮೌಲ್ಯದ ಚಿನ್ನ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
*ಕಿಟಕಿಯಿಂದ ನುಸುಳಿ ಚಿನ್ನ ಎಗರಿಸಿರುವ ಖದೀಮರು:*
ಮದುವೆ ವೇಳೆ ವರನ ಕಡೆಯವರು ನೀಡಿದ್ದ ಚಿನ್ನದಲ್ಲಿ ನೆಕ್ಲೆಸ್ ಮತ್ತು ಓಲೆಗಳನ್ನು ವಧುವಿನ ಕೊಠಡಿಯಲ್ಲಿ ಇರಿಸಿ ರೂಮಿನ ಲಾಕ್ ಮಾಡಿ ಎಲ್ಲರು ಮುಹೂರ್ತ ಕಾರ್ಯದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ವಧುವಿನ ಕೊಠಡಿಯ ಕಿಟಕಿ(ಸ್ಲೈಡಿಂಗ್ ಗ್ಲಾಸ್ ಕಿಟಕಿ)ಯಿಂದ ಒಳಬಂದಿರುವ ಕಳ್ಳರು ರೂಮನ್ನು ಒಳಗಿನಿಂದ ಲಾಕ್ ಮಾಡಿಕೊಂಡು ಚಿನ್ನವನ್ನು ಎಗರಿಸಿ ಕಿಟಕಿಯಿಂದಲೇ ಪರಾರಿಯಾಗಿದ್ದಾರೆ.
ಮುಹೂರ್ತದ ವೇಳೆ ವಧುವಿನ ಕಡೆಯವರು ಕೊಠಡಿಗೆ ಹೋಗಲು ಮುಂದಾದಾಗ ಕೊಠಡಿ ಒಳಗಿನಿಂದ ಲಾಕ್ ಆಗಿತ್ತು. ಇದರಿಂದ ವಿವಾಹ ಸಂದರ್ಭದಲ್ಲಿ ತೀವ್ರ ಗೊಂದಲ ಉಂಟಾಗಿದೆ. ತಕ್ಷಣ ಕಟ್ಟಡ ಮಾಲೀಕರಿಗೆ ವಿಷಯ ಮುಟ್ಟಿಸಿದ್ದು, ಮಾಲೀಕರು ಮತ್ತು ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಕಳ್ಳರು ಕಿಟಕಿ ಮೂಲಕ ಒಳಬಂದಿರುವುದು ಬೆಳಕಿಗೆ ಬಂದಿದೆ.
ಶಾಲಿಮಾರ್ ಹಾಲ್ ಪಕ್ಕದಲ್ಲಿ ಕಟ್ಟಡವೊಂದನ್ನು ಕಟ್ಟುತ್ತಿದ್ದು, ಅದರ ಮೇಲಿನಿಂದ ಹತ್ತಿ ಖದೀಮರು ವಧುವಿನ ಕೊಠಡಿ ಕಿಟಕಿ ಮೂಲಕ ಒಳನುಸುಳಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ವಿಷಯ ತಿಳಿದ ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಂಡವನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ ಕಟ್ಟಡದಲ್ಲಿ ಸುಮಾರು 16 ಸಿಸಿ ಕ್ಯಾಮರಗಳು ಇವೆ ಎಂದು ತಿಳಿದುಬಂದಿದ್ದು, ಸಿಸಿ ಕ್ಯಾಮರಗಳ ದೃಶ್ಯಗಳು ಕಳ್ಳರ ಪತ್ತೆಗೆ ಸಹಾಯಕವಾಗುವ ಸಾಧ್ಯತೆಯಿದೆ. ಈಗಾಗಲೇ ಇಬ್ಬರು ವ್ಯಕ್ತಿಗಳ ಚಹರೆ ಪತ್ತೆಯಾಗಿದೆ ಎನ್ನಲಾಗಿದೆ.
ಮದುವೆ ಮನೆಯವರು ಇನ್ನೂ ಅಧಿಕೃತವಾಗಿ ಠಾಣೆಗೆ ದೂರು ನೀಡಿಲ್ಲ, ಗುರುವಾರ ಬೆಳಿಗ್ಗೆ ಈ ಬಗ್ಗೆ  ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಲಿದ್ದಾರೆ.
*ನಷ್ಟ ಭರಿಸಿಕೊಡುವ ಭರವಸೆ:*
ವಧುವಿನ ಕೊಠಡಿಗೆ ಸರಳುಗಳಿಲ್ಲದ ಮಾಮೂಲಿ ಕಿಟಕಿ ಇರಿಸಿರುವ ಬಗ್ಗೆ ಕಟ್ಟಡ ಮಾಲೀಕರ ವಿರುದ್ಧ ವಧುವರರ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಲಕ್ಷ್ಯದ ಬಗ್ಗೆ ಕಟ್ಟಡ ಮಾಲೀಕರು ವಿಷಾದ ವ್ಯಕ್ತಪಡಿಸಿದ್ದು, ಚಿನ್ನ ಪತ್ತೆಯಾಗದಿದ್ದಲ್ಲಿ ನಿರ್ಲಕ್ಷ್ಯದ ನೈತಿಕ ಹೊಣೆ ಹೊತ್ತು ಆಗಿರುವ ನಷ್ಟಭರಿಸಿಕೊಡುವುದಾಗಿ ವಧುವರರ ಕಡೆಯವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು