ಇತ್ತೀಚಿನ ಸುದ್ದಿ
ಮೂಡಿಗೆರೆ: ಮರ ಕಸಿ ಮಾಡುವಾಗ ಆಕಸ್ಮಾತ್ ಬಿದ್ದು ಯುವಕ ದಾರುಣ ಸಾವು
15/03/2023, 18:43
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮರಗಸಿ ಮಾಡುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಣೇಶ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಶ್ರೀಧರ್ ಮೂಡಿಗೆರೆ ಎಂಬುವರ ತೋಟದಲ್ಲಿ ಮರಗಸಿ ಮಾಡುವಾಗ ಈ ದುರ್ಘಟನೆ ನಡೆದಿದೆ.
ಮರದಿಂದ ಬಿದ್ದು ತೀವ್ರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇತ್ತೀಚೆಗೆ ಮರಗಸಿ ಮಾಡುವಾಗ ಬಿದ್ದು ಸಾವನ್ನಪ್ಪಿದ ಎರಡನೇ ಘಟನೆ ಇದಾಗಿದೆ.














