ಇತ್ತೀಚಿನ ಸುದ್ದಿ
ಮೂಡಿಗೆರೆ ಮತ್ತಿಗಟ್ಟೆ: ಕಾಡುಕೋಣ ದಾಳಿಗೆ ಬೈಕ್ ಸವಾರರು ತೀವ್ರ ಗಾಯ; ಆಸ್ಪತ್ರೆಗೆ ದಾಖಲು
27/01/2023, 11:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka agnail.com
ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ್ದು, ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಕಲ್ಯಾಣಗದ್ದೆ ಗ್ರಾಮದ ದಿಲೀಪ್ ಹಾಗೂ ಆಶಾ ಗಾಯಗೊಂಡ ಬೈಕ್ ಸವಾರರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರರು
ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ.
ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.