1:57 PM Friday29 - November 2024
ಬ್ರೇಕಿಂಗ್ ನ್ಯೂಸ್
ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿದ ಇಬ್ಬರು ಕೂಲಿ ಕಾರ್ಮಿಕರು ಸಾವು

27/02/2023, 22:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮುಳ್ಳು ಹಂದಿ ಶಿಕಾರಿ ಮಾಡಲು ಸುರಂಗದ ಒಳಗೆ ಪ್ರವೇಶಿಸಿದ ಇಬ್ಬರು ಕೂಲಿ ಕಾರ್ಮಿಕರು ಉಸಿರಾಟ ಆಗದೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ.

ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28) ಹಾಗೂ ಶರತ್ (26) ಅವರು ಉಸಿರುಗಟ್ಟಿ ಸಾವನ್ನಪ್ಪಿದ ಕೂಲಿಕಾರ್ಮಿಕರು.
ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ ತೆರಳಿದ್ದರು ಎನ್ನಲಾಗಿದೆ.
ಸುರಂಗದ ದರಕ್ಕೆ ಹೊಗೆ ಹಾಕಿ ಇಬ್ಬರು ದರದ ಒಳಗೆ ನುಗ್ಗಿದ ಪರಿಣಾಮ ಹೊಗೆಯಿಂದಾ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುವ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಾಳೂರು ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್, ಪೊಲೀಸರು ಮತ್ತು ಸ್ಥಳೀಯರು ಗುಹೆಯೊಳಗೆ ನುಗ್ಗಿ ಶವಗಳನ್ನು ಹೊರತೆಗೆದರು.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು