1:44 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೇಮಾವತಿ ನದಿಯಲ್ಲಿ ಪತ್ತೆ

18/02/2024, 12:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್ (36) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದು,‌ ಅವರ ಶವ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ.
ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ ಮೇಲ್ಬಾಗದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ನಂತರ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ಶಂಕರ್ ಅವರ ಶವವಾಗಿತ್ತು.
ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಮತ್ತು ಸಮಾಜ ಸೇವಕ ಫಿಶ್ ಮೋಣು ತಂಡದವರ ಸಹಾಯದಿಂದ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.
ಶವವನ್ನು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಮೃತ ಶಂಕರ್ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು