ಇತ್ತೀಚಿನ ಸುದ್ದಿ
ಮೂಡಿಗೆರೆ ಸಮೀಪ ಚಲಿಸುತ್ತಿದ್ದ ಟ್ರಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ: ಚಾಲಕ ಗಂಭೀರ ಗಾಯ
21/12/2023, 19:51
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಲಿಸುತ್ತಿದ್ದ ಟ್ರಾಕ್ಟರ್ ಒಂದಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ
ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ನಡೆದಿದೆ.
ಮಾರುತಿ 800 ಕಾರೊಂದು ಟ್ರಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಚಾಲಕನ ಸ್ಥಿತಿ ಗಂಭೀರವಾಗಿದೆ.
ಕಾರು ಚಾಲಕನನ್ನು ಕೀರ್ತಿ ಎಂದು ಗುರುತಿಸಿಲಾಗಿದೆ. ಕೀರ್ತಿ ಬೇಲೂರು ತಾಲ್ಲೂಕು ಚೀಕನಹಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಚಾಲಕ ಕಾರೊಳಗೆ ಸಿಲುಕಿಕೊಂಡು ಹೊರತೆಗೆಯಲು ಸ್ಥಳೀಯರು ಮತ್ತು ಸ್ಥಳೀಯರು ಹರಸಾಹಸಪಟ್ಟ್ರರು.
ಗಾಯಾಳುವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.
KA-34 M. 1708 ನಂಬರಿನ ಮಾರುತಿ 800 ಕಾರು ಟ್ರಾಕ್ಟರ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಮುತ್ತಿಗೆಪುರ ಪ್ರೌಢಶಾಲೆ ಬಳಿ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಯುವಕನ ಮುಖ, ಕುತ್ತಿಗೆ, ಕೈ ಕಾಲು ಭಾಗಕ್ಕೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.