3:49 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು

22/12/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ.
ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ  ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು.
ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತ ಕೀರ್ತಿ(21) ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದವರು. ಚೀಕನಹಳ್ಳಿ ಗ್ರಾಮದ ದಿವಂಗತ ಹಾಲಪ್ಪ ಎಂಬುವವರ ಪುತ್ರ. ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟ್ರಾಕ್ಟರ್ ಚಿಕ್ಕಮಗಳೂರು ತಾಲ್ಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದುಬಂದಿದೆ.
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ಕೀರ್ತಿ ತಂದೆ ತಾಯಿ ಇಬ್ಬರು ಮರಣ ಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು