4:51 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮೂಡಿಗೆರೆ ಶಾಸಕರ ಮಹಾ ಎಡವಟ್ಟು: ಒಂದೇ ಗ್ರಾಮಕ್ಕೆ ಎರಡು ಸೇತುವೆ!: ನಿರ್ಮಾಣಗೊಳ್ಳುತ್ತಿರುವ ಸೇತುವೆ ಪಕ್ಕವೇ ಮತ್ತೊಂದಕ್ಕೆ ಶಿಲಾನ್ಯಾಸ!!

19/03/2023, 12:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಒಂದೇ ಊರಿಗೆ ಎರಡು ಸೇತುವೆ ಸ್ಯಾಂಕ್ಷನ್ ಮಾಡಿಸಿದ್ದಾರೆ. ಒಂದು ಸೇತುವೆಯ ಕಾಮಗಾರಿ ಇನ್ನೇನು ಮುಗಿಯುವಷ್ಟರಲ್ಲಿ, ಪಕ್ಕದಲ್ಲೇ ಇನ್ನೊಂದು ಸೇತುವೆಗೆ ಗುದ್ದಲಿ ಪೂಜೆ ನಡೆದಿದೆ. ಊರಿನವರಿಗೆ ಅಚ್ಚರಿ, ಗೊಂದಲ ಎರಡೂ ಆಗಿದೆ.

ಇದೆಲ್ಲ ನಡೆದಿರುವುದು ಕಳಸ ತಾಲೂಕಿನ ಮುಂಡುಗದಮನೆ ಗ್ರಾಮದಲ್ಲಿ. ಇದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರ ವ್ಯಾಪ್ತಿಗೆ ಬರುತ್ತದೆ. ಒಂದು ಸೇತುವೆ ಕಾಮಗಾರಿ ಮುಗಿಯುವ ಹಂತಕ್ಕೆ ಬರುತ್ತಿದ್ದಂತೆ ಮತ್ತೊಂದು ಸೇತುವೆ ಕಾಮಗಾರಿ ಆರಂಭವಾಗಿದೆ. ಒಂದೇ ಊರಿಗೆ ಡಬಲ್ ಸೇತುವೆ ಕಂಡು ಗ್ರಾಮಸ್ಥರು ಹುಬ್ಬು ಹಾರಿಸಿದ್ದಾರೆ.
ಮುಕ್ತಾಯ ಹಂತಕ್ಕೆ ಬಂದಿರುವ ಸೇತುವೆ ೨೦೧೮ ರಲ್ಲಿ ಆರಂಭವಾಗಿತ್ತು. ೩೮ ಲಕ್ಷ ವೆಚ್ಚದಲ್ಲಿ ಸೇತುವೆ ಕಾಮಗಾರಿ ಆರಂಭಗೊಂಡಿತ್ತು.
ದಿಢೀರ್ ಗುದ್ದಲಿ ಪೂಜೆ ಮಾಡಿ ಆರಂಭವಾದ 2 ಕೋಟಿ ವೆಚ್ಚದ ಮತ್ತೊಂದು ಸೇತುವೆ ಕೆಲಸ ಪಕ್ಕದಲ್ಲೇ ಆರಂಭವಾಗಿದೆ. ಶಾಸಕ‌ ಕುಮಾರಸ್ವಾಮಿಯಿಂದ ಸೇತುವೆ ನಿರ್ಮಾಣಕ್ಕೆ ಎರಡು ಕೋಟಿ ಹಣ ಬಿಡುಗಡೆಯಾಗಿತ್ತು.


ಧಾರಾಕಾರ ಮಳೆಯಿಂದ ದ್ವೀಪದಂತಾಗುತ್ತಿದ್ದ ೨೦ ಮನೆಗಳಿರುವ ಮುಂಡುಗದಮನೆ ಗ್ರಾಮದಲ್ಲಿ ಈ ಎರಡನೇ ಸೇತುವೆಗೆ ಗುದ್ದಲಿಪೂಜೆ ನಡೆದಿದೆ.
ನಿರ್ಮಾಣವಾಗುತ್ತಿರುವ ಸೇತುವೆ ಪಕ್ಕದಲ್ಲೇ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇರೆ ಗ್ರಾಮದ ಅಭಿವೃದ್ಧಿ ಕೆಲಸಕ್ಕೆ ಹಣ ಬಳಸದೆ ಎರಡು ಕೋಟಿ‌ ಹಣ ಪೋಲು ಎಂದು ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು