1:01 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ತರುವೆ ಗ್ರಾಪಂ, ಅಂಗನವಾಡಿ, ಲೈಬ್ರರಿಗೆ ನುಗ್ಗಿದ ಕಳ್ಳರು: ಫೈಲ್, ಲ್ಯಾಪ್ ಟಾಪ್ ಕಳವು

30/09/2022, 13:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ, ಅಂಗನವಾಡಿ ಹಾಗೂ ಲೈಬ್ರರಿಗೆ ಕಳ್ಳ ನುಗ್ಗಿದ ಘಟನೆ ತಡರಾತ್ರಿ ನಡೆದಿದೆ. ರಾತೋರಾತ್ರಿ ಮೂರು ಕಡೆ ಕಳ್ಳರು ನುಗ್ಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾತ್ರಿ 1.20 ನಿಮಿಷಕ್ಕೆ ಒಳ ನುಗ್ಗಿದ ಕಳ್ಳರು ಸುಮಾರು ಎರಡು ಗಂಟೆಗಳ ಕಾಲ ಒಳಗೆ ಸರ್ಚ್ ಮಾಡಿದ್ದಾರೆ.

ತರುವೆ ಗ್ರಾಮ ಪಂಚಾಯಿತಿ ಬೀಗ ಹೊಡೆದು ಒಳ ನುಗ್ಗಿದ  ಕಳ್ಳರು ಪಂಚಾಯಿತಿಯಲಿದ್ದ ಪ್ರತಿಯೊಂದು ಗೋದ್ರೆಜ್ ಓಪನ್ ಮಾಡಿ ಸರ್ಚ್ ಮಾಡಿದ್ದಾರೆ. ಯಾವುದೋ ಒಂದು ಫೈಲ್ ಎಗರಿಸಿ ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


ಒಂದು ಲ್ಯಾಪ್ಟಾಪ್ ಸಹ ಕಳವು ಆಗಿದೆ ಎಂಬ ಮಾಹಿತಿ ದೊರಕಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಶ್ವಾನದಳ ಮತ್ತು ಬೆರಳಚ್ಚು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು