ಇತ್ತೀಚಿನ ಸುದ್ದಿ
ಮೂಡಿಗೆರೆ ಸಮೀಪ ಗೊಬ್ಬರ ತುಂಬಿಸಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು
23/05/2024, 15:26
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಬಳಿ ನಡೆದಿದೆ.
ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಸತೀಶ್ (28)ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್ ಹೋಗುತ್ತಿತ್ರು. 50 ಚೀಲಕ್ಕೂ ಹೆಚ್ಚು ಗೊಬ್ಬರ ತುಂಬಿಕೊಂಡು
ಟ್ರ್ಯಾಕ್ಟರ್ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಉಲ್ಟಾವಾಗಿ ಟ್ರ್ಯಾಕ್ಟರ್ ಬಿದ್ದಿದೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.